Tuesday, June 9, 2026
Homeಕರಾವಳಿಕರಾವಳಿ ಹಾಗೂ ಬೆಂಗಳೂರಿನಲ್ಲಿ ಆಸ್ಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ!

ಕರಾವಳಿ ಹಾಗೂ ಬೆಂಗಳೂರಿನಲ್ಲಿ ಆಸ್ಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ!

- Advertisement -
- Advertisement -

ಮಂಗಳೂರು: ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಲ್ಲಿ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ನಾಳೆ ಬೆಳ್ಳಗ್ಗೆ 9:30ಕ್ಕೆ ಉಡುಪಿ ಚರ್ಚ್‌‌ನಲ್ಲಿ ಪ್ರಾರ್ಥನೆ ನಡೆಸಲಾಗುವುದು.

ಉಡುಪಿ ಚರ್ಚ್‌‌ನಲ್ಲಿ ಪ್ರಾರ್ಥನೆ ನಡೆದ ಬಳಿಕ ಉಡುಪಿ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಿ, ನಂತರದಲ್ಲಿ ಅಲ್ಲಿಂದ ಮಧ್ಯಾಹ್ನ 2:30ಕ್ಕೆ ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿಗೆ ರವಾನೆ ಮಾಡಿ 3:30 ರಿಂದ 5:30ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ಇನ್ನು ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿಯಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿ ಸಪ್ಟಂಬರ್ 15ರಂದು ಮುಂಜಾನೆ 10:30 ಕ್ಕೆ ನಗರದ ಮಿಲಾಗ್ರೀಸ್ ಚರ್ಚ್ ನಲ್ಲಿ ಪೂಜೆ ನಡೆಸಿ ಬಳಿಕ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.

ಬಳಿಕ ಬೆಂಗಳೂರಿನ ಸೈಂಟ್ ಪೆಟ್ರಿಕ್ ಚರ್ಚ್ ನಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವ ರೈ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!