Sunday, April 28, 2024
Homeಕರಾವಳಿಸುಳ್ಯ; ಐವರ್ನಾಡಿನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆ ಕಳ್ಳತನ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

ಸುಳ್ಯ; ಐವರ್ನಾಡಿನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆ ಕಳ್ಳತನ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಸುಳ್ಯ; ಐವರ್ನಾಡಿನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ದಿನಾಂಕ 14.03.2024 ರಂದು ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ  ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಮಂಡೆಕೋಲು ಗ್ರಾಮದ ಸುಪೀತ್‌ ಕೆ (20) ಎಂಬಾತನನ್ನು ವಶಕ್ಕೆ ಪಡೆದು, 83,000/ ರೂ ಮೌಲ್ಯದ  209  ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000/ ಮೌಲ್ಯದ ಆಟೋ ರಿಕ್ಷಾ ವನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಬೆಳ್ಳಾರೆ ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಬಿ.ಪಿ ಸಂತೋಷ್ ಹಾಗೂ ಠಾಣಾ ಸಿಬ್ಬಂದಿಯಾದ  ನವೀನ ಕೆ , ಕೃಷ್ಣಪ್ಪ, ದೇವರಾಜ್‌,  ಸಂತೋಷ್‌ ಕೆ ಜಿ, ಸುಭಾಸ್‌ ಕಿತ್ತೂರ,  ಪುರಂದರ ರವರುಗಳ ತನಿಖಾ ತಂಡ ಕಾರ್ಯಾಚರಣೆ ನಡೆಸಿರುತ್ತಾರೆ.

- Advertisement -
spot_img

Latest News

error: Content is protected !!