Tuesday, April 30, 2024
Homeಕರಾವಳಿಮಂಗಳೂರು: ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಆರೋಪಿ ಅರೆಸ್ಟ್ !

ಮಂಗಳೂರು: ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಆರೋಪಿ ಅರೆಸ್ಟ್ !

spot_img
- Advertisement -
- Advertisement -

ಮಂಗಳೂರು: ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರ ಮಾಡಿದ ಘಟನೆ ಬಜ್ಪೆಯಲ್ಲಿ ನಡೆದಿದೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಮಾಡಿದ ಯುವಕನನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯು ಇಬ್ಬರು ಪರಿಚಯದವರು. ಒಂದೇ ಕಾಲೇಜಿನಲ್ಲಿ ಕಲಿಯುತ್ತಿದ್ದರು, 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರೂ ಕೂಡ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದರು.

ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ, ಅಬುಬಕರ್ ಸಿದ್ದಿಕ್ ಯುವತಿಯನ್ನು ಪೀಡಿಸುತ್ತಿದ್ದ. ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಬೆದರಿಸಿದ್ದ.

ಯುವತಿ ಡಿಸೆಂಬರ್ 8 ರಂದು ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಈತ ಹಿಂಬಾಲಿಸಿಕೊಂಡು ಬಂದು ಆಕೆಯ ಮನೆಗೆ ನುಗ್ಗಿ ಆತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದಳು‌. ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!