Monday, June 8, 2026
Homeಕರಾವಳಿಭೂಗತ ಪಾತಕಿ ರವಿ ಪೂಜಾರಿ ಆಪ್ತ ಸಹಚರನ ಬಂಧನ

ಭೂಗತ ಪಾತಕಿ ರವಿ ಪೂಜಾರಿ ಆಪ್ತ ಸಹಚರನ ಬಂಧನ

- Advertisement -
- Advertisement -

ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ನಟೋರಿಯಸ್‌ ಶಾರ್ಪ್ ಶೂಟ‌ರ್ ಕೇರಳದ ಮಂಜೇಶ್ವರ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ.

ಈತ ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ. ಈತ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದ. ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ಪಾಲ್ಗೊಂಡಿರುವ ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿವೆ. 

2010 ಮತ್ತು 2013ರಲ್ಲಿ ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್‌ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ ,ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಶೆಟ್ಟಿ ಸಿಲ್ಕ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಈತ ನಡೆಸಿದ ಶೂಟೌಟ್ ಪ್ರಕರಣ ಭಾರೀ ಸದ್ದು ಮಾಡಿತ್ತು. 

ಪ್ರಸ್ತುತ ಈತನನ್ನು ಎಸಿಪಿ ಧನ್ಯ ನಾಯಕ್‌ ನೇತೃತ್ವದ ತಂಡ ಮತ್ತು ಕೊಣಾಜೆ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.

- Advertisement -

Latest News

error: Content is protected !!