Saturday, June 6, 2026
Homeಕರಾವಳಿಉಡುಪಿಕಾರ್ಕಳ: ಹಲವು ಕಡೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳನ ಸೆರೆ

ಕಾರ್ಕಳ: ಹಲವು ಕಡೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳನ ಸೆರೆ

- Advertisement -
- Advertisement -

ಕಾರ್ಕಳ: ಇಲ್ಲಿನ ಅಂಗಡಿಯೊಂದರಲ್ಲಿ ಹಣ ಕದ್ದು ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಮಡಿಕೇರಿಯಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಹಾಸನ ಜಿಲ್ಲೆ ವಿಜಯನಗರ ನಿವಾಸಿ ಮಹಮ್ಮದ್ ಇಕ್ಬಾಲ್ ಬಂಧಿತ ಆರೋಪಿ. ಕಾರ್ಕಳದ ಬೈಪಾಸ್ ರಸ್ತೆಯಲ್ಲಿರುವ ಟಿಎಂಎ ಪೈ ಆಸ್ಪತ್ರೆಯ ಮುಂಭಾಗದ ಮಂಜುಶ್ರೀ ಕಟ್ಟಡದಲ್ಲಿದ್ದ ಧ್ವನಿ ಹಾರ್ಡ್‌ವೇರ್ ಅಂಗಡಿಯಿಂದ 1.45 ಲಕ್ಷ ರೂ. ನಗದು ಹಣವನ್ನು ಕಳವು ಮಾಡಿ ತಲೆಮರೆಸಿಕೊಂಡಿದ್ದ.  

ಆರೋಪಿ ಇಕ್ಬಾಲ್ ಕುಖ್ಯಾತ ಕಳ್ಳನಾಗಿದ್ದು ಈತನ ಮೇಲೆ ಹಲವು ಕಡೆಗಳಲ್ಲಿ ಕಳವು ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

- Advertisement -

Latest News

error: Content is protected !!