Tuesday, February 27, 2024
Homeಕರಾವಳಿನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

spot_img
spot_img
- Advertisement -
- Advertisement -

ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ : 240/2014 ರಲ್ಲಿ ಆರೋಪಿಯಾಗಿ, ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಮಂಜನಾಡಿ ಗ್ರಾಮದ ನಾಟೇಕಲ್ ನ ಅಶ್ರಫ್ ಎಂಬಾತನನ್ನು ದಿನಾಂಕ: 04-12-2023 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಹೆಚ್ ಸಿ ಗಣೇಶ್ ಪ್ರಸಾದ್ ಹಾಗೂ ಪಿಸಿ ವಿಜಯಕುಮಾರ ರವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ದಸ್ತಗಿರಿ ಮಾಡಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.

- Advertisement -

Latest News

error: Content is protected !!