Tuesday, April 30, 2024
Homeಕರಾವಳಿಪುತ್ತೂರು : ವಾಹನ ತೆರಿಗೆ ಕಟ್ಟದೆ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಪುತ್ತೂರು : ವಾಹನ ತೆರಿಗೆ ಕಟ್ಟದೆ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

spot_img
- Advertisement -
- Advertisement -

ಪುತ್ತೂರು :  ಪ್ರಾದೇಶಿಕ ಸಾರಿಗೆ ಇಲಾಖೆಗೆ ಬಸ್‌ವೊಂದರ ತೆರಿಗೆ ತೆರಿಗೆ ಪಾವತಿಸದೆ, ದಂಡವೂ ಕಟ್ಟದೆ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನೆಕ್ಕಿಲಾಡಿಯ ಅರಫ್ ಕಾಟೇಜ್‌ನ ಪಿ.ಉಸ್ಮಾನ್(42ವ) ರನ್ನು ಬಂಧಿಸಿ ತೆರಿಗೆ ಕಟ್ಟಿದ ಬಳಿಕ ಪೊಲೀಸರು ಬಿಡುಗಡೆ ಮಾಡಿದ್ದಾರೆ.

2005 ರಲ್ಲಿ ಉಸ್ಮಾನ್ ಖಾಸಗಿ ಬಸ್‌ನ ಮಾಲೀಕರಾಗಿದ್ದರು. ಆ ಬಸ್‌ಗೆ ಪ್ರಾದೇಶಿಕ ಸಾರಿಗೆ ಇಲಾಖೆಗೆ ತೆರಿಗೆಯನ್ನು ಪಾವತಿಸದೆ ಓಡಿಸುತ್ತಿದ್ದರು. ಈ ಕುರಿತು ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪನ ಪಟ್ಟಿ ಸಲ್ಲಿಸಿದ್ದರು. ಆರೋಪಿಯು ನ್ಯಾಯಾಲಯಕ್ಕೆ ದಂಡ ಪಾವತಿಸದೆ ಸುಮಾರು 16 ವರ್ಷದಿಂದ ತಲೆಮರೆಸಿಕೊಂಡಿದ್ದರು. ಈ ಹಿನ್ನೆಲೆ ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು.

ತನಿಖೆ ಕೈಗೆತ್ತಿಕೊಂಡ ಪುತ್ತೂರು ನಗರ ಠಾಣಾ ಪೊಲೀಸರು ಎಸ್.ಐ ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಎ.ಎಸ್.ಐ ಚಂದ್ರ, ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಮತ್ತು ಸಿಬ್ಬಂದಿ ಕಿರಣ್ ಅವರು ಆರೋಪಿಯನ್ನು ಮಂಗಳೂರು ಬಲ್ಮಠದಲ್ಲಿ ಬಂಧಿಸಿದ್ದಾರೆ.

ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಗೆ ಬಸ್‌ವೊಂದರ ತೆರಿಗೆ ತೆರಿಗೆ ಪಾವತಿಸದೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ದಂಡ ಕಟ್ಟದೆ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನ್ಯಾಯಾಲಯದಲ್ಲಿ ದಂಡ ಪಾವತಿಸಿದ ಬಳಿಕ ಆತನ ಮೇಲಿರುವ ಪ್ರಕರಣ ರದ್ದುಪಡಿಸಲಾಗಿದೆ.

- Advertisement -
spot_img

Latest News

error: Content is protected !!