Monday, June 8, 2026
Homeಕರಾವಳಿಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಬಸ್ಟ್ಯಾಂಡ್ ಬಳಿ ಓರ್ವ ವ್ಯಕ್ತಿ ನಶೆ ಬರುವ ವಸ್ತುವನ್ನು ಸೇವಿಸಿ ತೂರಾಡಿಕೊಂಡು ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ. ಇದನ್ನು ಕಂಡ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಮತ್ತು ತಂಡದವರು ಸ್ಥಳಕ್ಕೆ ಹೋಗಿ ವಿಚಾರಿಸಿದಾಗ ಸರಿಯಾದ ಮಾಹಿತಿ ನೀಡದೆ ಇದ್ದಾಗ ಸುತ್ತಮುತ್ತ ಸರಿಯಾಗಿ ತಪಾಸಣೆ ಮಾಡಿದಾಗ ನಿಷೇಧಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ಕಂಡು ಬಂದಿದೆ .

ತಕ್ಷಣ ಪಂಚರ ಸಮಕ್ಷಮದಲ್ಲಿ ಮಹಜರು ಮಾಡಿ ವಶಕ್ಕೆ ಪಡೆದು ವಿಚಾರಿಸಿದಾಗ ಆರೋಪಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಶೇಖ್ ಜಹೀರ್ (26) ಎಂದು ಗುರುತಿಸಲಾಗಿದೆ‌. ನಂತರ ಮಂಗಳೂರು ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ‌. ಈತನ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ. ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!