- Advertisement -
![]()
- Advertisement -
ಮಂಗಳೂರು; ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಕರಿಂಗಲ ನಿವಾಸಿ ನವಾಜ್ (36) ಬಂಧಿತ ಆರೋಪಿ.
ದಿನಾಂಕ 17-03-2026 ರಂದು ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ಅ.ಕ್ರ: 375/2014 ಕಲಂ 393, 398 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ನವಾಜ್ ನನ್ನು ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಬಂಧಿಸಿ ಮಂಗಳೂರು ನಗರದ ಮಾನ್ಯ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಈತನಿಗೆ ದಿನಾಂಕ 25-03-2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
- Advertisement -


