Friday, May 24, 2024
Homeಕರಾವಳಿಬಂಟ್ವಾಳ:ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಕಳವುಗೈದ ಆರೋಪಿಯ ಬಂಧನ

ಬಂಟ್ವಾಳ:ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಕಳವುಗೈದ ಆರೋಪಿಯ ಬಂಧನ

spot_img
- Advertisement -
- Advertisement -

ಬಂಟ್ವಾಳ: ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಕಳವುಗೈದ ಆರೋಪಿಯನ್ನು ಬಂಧಿಸಿರುವ ಘಟನೆ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ನಡೆದಿದೆ.ಕಶೆಕೋಡಿ ನಿವಾಸಿ ಮಂಜುನಾಥ ನಾಗರಾಜ ಬೋವಿ ಬಂಧಿತ ಆರೋಪಿ.

ಬೋಳಂಗಡಿ ನಿವಾಸಿ ಐವನ್ ಥೋರಸ್ ಎಂಬವರು ತನ್ನ ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಅಡಿಕೆ ಒಣಗಲು ಹಾಕಿದ್ದರು. ಡಿ.24 ಮತ್ತು ಡಿ.29ರ ಮಧ್ಯದ ಅವಧಿಯಲ್ಲಿ ಇದರಿಂದ 100-120 ಕೆ.ಜಿ ಅಡಿಕೆಯನ್ನು ಯಾರೋ ಕಳವುಗೈದಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಬಂಟ್ವಾಳ ನಗರ ಪೊಲೀಸ್ ಠಾಣೆ ಪೊಲೀಸರು ಕಶೆಕೋಡಿ ನಿವಾಸಿ ಮಂಜುನಾಥ ನಾಗರಾಜ್ ಭೋವಿ ಎಂಬಾತನನ್ನು ವಶಕ್ಕೆ ಪಡೆದು ಕಳವು ಮಾಡಿದ 105 ಕೆ.ಜಿ. ಅಡಿಕೆ, ಕಳವು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ಹಾಗೂ ನಗದು ಹಣವನ್ನು ವಶಪಡಿಸಲಾಗಿದೆ.

ಬಂಧಿತ ಆರೋಪಿ ಮಂಜುನಾಥ ಭೋವಿ ವಿರುದ್ಧ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಅಲ್ಲದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರ, ಹೊನ್ನಾವರ ಠಾಣಾ ವ್ಯಾಪ್ತಿಯಲ್ಲಿ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!