Saturday, June 13, 2026
Homeಅಪರಾಧಹುಲಿ ಉಗುರು ಡಾಲರ್ ಧರಿಸಿದ್ದ ಅರ್ಚಕರ ಬಂಧನ; ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ದೇವಾಲಯದ ಅರ್ಚಕರು

ಹುಲಿ ಉಗುರು ಡಾಲರ್ ಧರಿಸಿದ್ದ ಅರ್ಚಕರ ಬಂಧನ; ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ದೇವಾಲಯದ ಅರ್ಚಕರು

- Advertisement -
- Advertisement -

ಚಿಕ್ಕಮಗಳೂರು: ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಖಾಂಡ್ಯ ಮಾರ್ಕಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿ ಉಗುರು ಪ್ರಕರಣದಲ್ಲಿ ಬಂಧಿಸಿದ್ದಾರೆ.

ಖಾಂಡ್ಯ ಮಾರ್ಕಂಡೇಶ್ವರ ದೇವಾಲಯದಲ್ಲಿ ಅರ್ಚಕ ವೃತ್ತಿಯನ್ನು ನಿರ್ವಹಿಸುತ್ತಿದ್ದ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ್ ಬಂಧಿತರು.

ಬಾಳೆಹೊನ್ನೂರು ವಲಯ ಅರಣ್ಯ ಅಧಿಕಾರಿಗಳಿಂದ ನಡೆದ ಈ ಕಾರ್ಯಾಚರಣೆಯಲ್ಲಿ, ಅರ್ಚಕರಿಬ್ಬರಿಂದ ಮೂರು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ. ನಂತರದಲ್ಲಿ ಚಿಕ್ಕಮಗಳೂರು ಜೆ.ಎಂ.ಎಫ್‌.ಸಿ. ನ್ಯಾಯಾಲಯಕ್ಕೆ ಅರ್ಚಕರನ್ನು ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!