Monday, June 8, 2026
Homeಕರಾವಳಿಮಂಗಳೂರುಮಂಗಳೂರು: ಮಹಿಳೆಯನ್ನು ಬೆದರಿಸಿ ಹಣ ದೋಚಿದ ಆರೋಪಿಯ ಬಂಧನ

ಮಂಗಳೂರು: ಮಹಿಳೆಯನ್ನು ಬೆದರಿಸಿ ಹಣ ದೋಚಿದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: ಮಹಿಳೆಯನ್ನು ಬೆದರಿಸಿ ಹಣ ದೋಚಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೊಂದೇಲ್ ಪಟ್ರಕೋಡಿಯ ಸುನೀಲ್ (31) ಬಂಧಿತ ಆರೋಪಿ.

ಆರೋಪಿ ಸುನೀಲ್ ನಾಗುರಿಯ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್‌ನ ಕ್ಯಾಶ್ ಡ್ರಾವ‌ರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪರಾರಿಯಾಗಿದ್ದ.

ಅದರಂತೆ ಆರೋಪಿ ಸುನೀಲ್‌ನನ್ನು ದಸ್ತಗಿರಿ ಮಾಡಿ ದೋಚಿದ್ದ ರೂ. 17,500 ನಗದು ಹಣವನ್ನು ಹಾಗೂ ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರೆ ಸೊತ್ತುಗಳು ಸೇರಿದಂತೆ ಒಟ್ಟು ರೂ. 1,20,000 ಬೆಲೆ ಬಾಳುವ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!