Wednesday, June 24, 2026
Homeಕರಾವಳಿಮಂಗಳೂರು: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಸಾಗಿಸುತ್ತಿದ್ದ ಮೂವರ ಬಂಧನ

ಮಂಗಳೂರು: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಸಾಗಿಸುತ್ತಿದ್ದ ಮೂವರ ಬಂಧನ

- Advertisement -
- Advertisement -

ಮಂಗಳೂರು: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಸಾಗಿಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಶಾಜಹಾನ್. ಪಿ.ಎಂ(32) ಕಾಸರಗೋಡು, ನಿಶಾದ್(27), ಕಾಸರಗೋಡು,  ಮನ್ಸೂರು ಎಂ.ಎಂ(27) ಕೊಡಗು, ಬಂಧಿತ ಆರೋಪಿಗಳು. ಆರೋಪಿಗಳಿಂದ 42 ಗ್ರಾಂ ಎಂಡಿಎಂಎ ಅನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

 ಬಂಧಿತರು ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿ  2,10,000/- ರೂ ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಂಡಿದ್ದಾಕೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 12,18,500/- ಆಗಬಹುದು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಹೊಸ ಕಾರನ್ನು ಬಾಡಿಗೆಗೆ ಪಡೆದುಬೆಂಗಳೂರಿನಿಂದ ಎಂಡಿಎಂಎನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

- Advertisement -

Latest News

error: Content is protected !!