Thursday, June 4, 2026
HomeUncategorizedಮಂಗಳೂರು:ಉಳ್ಳಾಲದಲ್ಲಿ ಮಹಿಳೆಯ ಸರ ಕದ್ದು ಪರಾರಿಯಾಗಿದ್ದ ಇಬ್ಬರ ಬಂಧನ

ಮಂಗಳೂರು:ಉಳ್ಳಾಲದಲ್ಲಿ ಮಹಿಳೆಯ ಸರ ಕದ್ದು ಪರಾರಿಯಾಗಿದ್ದ ಇಬ್ಬರ ಬಂಧನ

- Advertisement -
- Advertisement -

ಮಂಗಳೂರು:ಉಳ್ಳಾಲದಲ್ಲಿ ಮಹಿಳೆಯ ಸರ ಕದ್ದು ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಚಿನ್ನದ ಸರ ಕದ್ದು ಇಬ್ಬರು ಕಳ್ಳರು ಪರಾರಿಯಾಗಿದ್ದರು. ಅವರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್ ಯಾನೆ ನಿಯಾ(28) ಬಂಧಿತ ಆರೋಪಿಗಳು. ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬವರು ಶುಕ್ರವಾರದಂದು ಮುದುಂಗಾರು ಕಟ್ಟೆ ಶಾಲಾ ಹಿಂಭಾಗದ ಪರಿಸರದಲ್ಲಿ ಸೊಪ್ಪು ಕಡಿಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಯಮುನಾ ಅವರ ಚಿನ್ನದ ಸರ  ಕದ್ದು ಪರಾರಿಯಾಗಿದ್ದರು. ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದರು. ಬಳಿಕ ಕೂಡಲೇ ಮಹಿಳೆಯ ಮನೆಯವರು ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದರು ಹಾಗೂ ಸಿಸಿ ಟಿವಿಗಳ ಪರಿಶೀಲನೆ ನಡೆಸಿ ಎರಡೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಭಾನುವಾರ ಕೈರಂಗಳ ಗ್ರಾಮದ ವಿದ್ಯಾನಗರ ಬಸ್ ನಿಲ್ದಾಣದ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಗ್ರಾಂ ಬಂಗಾರ ಹಾಗೂ ಸ್ಕೂಟರನ್ನು ವಶಪಡಿಸಿಕೊಂಡಿಸಿದ್ದಾರೆ.

ಆರೋಪಿಗಳಲ್ಲಿ ನವಾಝ್ ಎಂಬಾತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೇ ದರೋಡೆ ಹಾಗೂ ಗಲಾಟೆ ಪ್ರಕರಣಗಳು ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Latest News

error: Content is protected !!