Saturday, June 6, 2026
Homeಕರಾವಳಿಬಂಟ್ವಾಳ: ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್

ಬಂಟ್ವಾಳ: ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್

- Advertisement -
- Advertisement -

ಬಂಟ್ವಾಳ: ವಂಚನೆ ಪ್ರಕರಣದಲ್ಲಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಸಂಪ್ಯ ನಿವಾಸಿ ಅಬ್ದುಲ್ ಅಜೀಜ್ ಬಂಧಿತ ಆರೋಪಿ.  ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮುಂಬಯಿಯಲ್ಲಿ ಬಂಧಿಸಿ‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ವಂಚನೆ ಪ್ರಕರಣಗಳು ದಾಖಲಾಗಿವೆ. ವಂಚನೆ ಸಹಿತ ಇನ್ನಿತರ ಪ್ರಕರಣಗಳಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿದ್ದು, ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಇದೀಗ ಆರೋಪಿಯನ್ನು ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ.ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ , ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಪೋಲೀಸ್ ಉಪನಿರೀಕ್ಷಕರುಗಳಾದ ರಾಮಕೃಷ್ಣ, ಕಲೈಮಾರ್, ದುರ್ಗಪ್ಪ, ಗೋಪಾಲ‌ಅವರ ನೇತ್ರತ್ವದಲ್ಲಿ ಎ.ಎಸ್.ಐ.ಸುಜು, ಹೆಚ್.ಸಿ. ಜಗದೀಶ್ ಅವರು ಮಾಹಿತಿ ಸಂಗ್ರಹಿಸಿ ಮಹಾರಾಷ್ಟ್ರದ ಮುಂಬಯಿ ಎಂಬಲ್ಲಿಗೆ ತೆರಳಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ

- Advertisement -

Latest News

error: Content is protected !!