Saturday, May 4, 2024
Homeಕರಾವಳಿಮಂಗಳೂರಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ; ಮೋರಲ್ ಪೊಲೀಸಿಂಗ್ ಬಗ್ಗೆ ಸಿಎಂ ಸಮರ್ಥನೆ!

ಮಂಗಳೂರಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ; ಮೋರಲ್ ಪೊಲೀಸಿಂಗ್ ಬಗ್ಗೆ ಸಿಎಂ ಸಮರ್ಥನೆ!

spot_img
- Advertisement -
- Advertisement -

ಮಂಗಳೂರು: ಸಮಾಜದಲ್ಲಿ ಹಲವಾರು ಭಾವನೆಗಳಿವೆ, ಇವುಗಳಿಗೆ ಧಕ್ಕೆ ಹಾಗೆ ನಾವು ನಡೆದುಕೊಳ್ಳಬೇಕಾಗುತ್ತದೆ. ಈ ರೀತಿಯ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ. ಹೀಗೆಂದು ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಘಟನೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಾಖ್ಯಾನಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ಹಿಂದು ಸಂಘಟನೆ ಕಾರ್ಯಕರ್ತರ ನೈತಿಕ ಪೊಲೀಸ್ ಕೆಲಸವನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿಗೆ‌ ಪೂರ್ವಹ್ನ 10 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಈ ಸಂಧರ್ಭದಲ್ಲಿ ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ’ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾನೂನು ಸುವ್ಯವಸ್ಥೆ ಜೊತೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರಕಾರದ ಕರ್ತವ್ಯ. ಯುವಕರು ಸಹ ಸಾಮಾಜಿಕ ಭಾವನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕುವುದಕ್ಕೆ ಆಗುವುದಿಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ನಮ್ಮ ನೈತಿಕತೆ ಮೇಲೆ ಇದೆ. ಇಲ್ಲಿ ಪ್ರತಿಯೊಬ್ಬರದ್ದು ಹೊಣೆಗಾರಿಕೆ ಇದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ವಿ. ಸುನೀಲ್ ಕುಮಾರ್, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಲಿದ್ದಾರೆ.

- Advertisement -
spot_img

Latest News

error: Content is protected !!