- Advertisement -
- Advertisement -
ಮಂಗಳೂರು: ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ.

ರವಿವಾರದಂದು ಪುಣೆಯಲ್ಲಿರುವ 13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ.ಸುಮಾರು 11.30 ಕ್ಕೆ ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.

ಪ್ರವಾಸಿಗರು ವಿಶೇಷ ಬಸ್ ಮೂಲಕ ಮೂಡುಬಿದಿರೆಯ ಸಾವಿರಕಂಬದ ಬಸದಿ, ಮತ್ತು ಕಾರ್ಕಳ, ಕಟೀಲ್, ಬಪ್ಪನಾಡು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದು, ಅವರು ಸೆಪ್ಟೆಂಬರ್ 27 ಸೋಮವಾರ ಮಡಿಕೇರಿಗೆ ಪ್ರಯಾಣ ಬೆಳೆಸಲಿ ಅಲ್ಲಿಂದ ಮೈಸೂರಿಗೆ ತೆರಳರಿದ್ದಾರೆಂದು ಹೇಳಲಾಗಿದೆ.
- Advertisement -