Sunday, May 5, 2024
Homeಕರಾವಳಿಶಿರಾಡಿ ಘಾಟಿ ಮೂಲಕ ಮಹಾಶಿವರಾತ್ರಿಗೆ ಪಾದಯಾತ್ರಿಗಳ ಆಗಮನ

ಶಿರಾಡಿ ಘಾಟಿ ಮೂಲಕ ಮಹಾಶಿವರಾತ್ರಿಗೆ ಪಾದಯಾತ್ರಿಗಳ ಆಗಮನ

spot_img
- Advertisement -
- Advertisement -

ಬೆಳ್ತಂಗಡಿ: ಮಹಾ ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ನೂರಾರು ತಂಡಗಳಲ್ಲಿ ಸಹಸ್ರಾರು ಪಾದಯಾತ್ರಿಗಳು ಚಾರ್ಮಾಡಿ ಘಾಟಿ ಮೂಲಕ ಆಗಮಿಸಿ ಧರ್ಮಸ್ಥಳದತ್ತ ಸಾಗುತ್ತಿದ್ದಾರೆ.

ಬೆಂಗಳೂರು, ತುಮಕೂರು, ಹಾಸನ, ರಾಮನಗರ, ಮಂಡ್ಯ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಿಂದ ಪಾದಯಾತ್ರಿಗಳ ದಂಡು ಬರಲಾರಂಭಿಸಿದೆ. ಶಿರಾಡಿ ಘಾಟಿ ಮೂಲಕ ಆಗಮಿಸುತ್ತಿರುವ ತಂಡಗಳು ಕೊಕ್ಕಡದಿಂದ ಧರ್ಮ ಸ್ಥಳಕ್ಕೆ ಪಾದಯಾತ್ರೆ ನಡೆಸುತ್ತಿವೆ.

ಚಾರ್ಮಾಡಿ ಮೂಲಕ ಆಗಮಿಸುತ್ತಿರುವ ಪಾದಯಾತ್ರಿಗಳು ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೈಶ್ವರ ದೇವಸ್ಥಾನ, ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನ ಹಾಗೂ ರಸ್ತೆ ಬದಿ ಅಲ್ಲಲ್ಲಿ ಟೆಂಟ್ ನಿರ್ಮಿಸಿ ಆಹಾರ ತಯಾರಿ ನಡೆಸಿ, ವಿಶ್ರಾಂತಿ ಪಡೆದು ಮೃತ್ಯುಂಜಯ ನದಿಯಲ್ಲಿ ಸ್ನಾನ ಮಾಡಿ ಧರ್ಮಸ್ಥಳಕ್ಕೆ ಕಲ್ಮಂಜ ಹಾಗೂ ಉಜಿರೆ ಮೂಲಕ ಹೆಜ್ಜೆ ಹಾಕುತ್ತಿದ್ದಾರೆ.

- Advertisement -
spot_img

Latest News

error: Content is protected !!