Thursday, August 20, 2026
Homeಕರಾವಳಿಉಡುಪಿಕೃತಕ ರಾಸಾಯನಿಕ ಬಳಸಿ ಬಾಳೆಹಣ್ಣು ಹಣ್ಣಾಗಿಸುವ ದಂಧೆ: ಉಡುಪಿಯಲ್ಲಿ ಅಧಿಕಾರಿಗಳ ದಿಢೀರ್ ದಾಳಿ

ಕೃತಕ ರಾಸಾಯನಿಕ ಬಳಸಿ ಬಾಳೆಹಣ್ಣು ಹಣ್ಣಾಗಿಸುವ ದಂಧೆ: ಉಡುಪಿಯಲ್ಲಿ ಅಧಿಕಾರಿಗಳ ದಿಢೀರ್ ದಾಳಿ

- Advertisement -
- Advertisement -

ಉಡುಪಿ: ತಾಲೂಕಿನ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳ ತಂಡ ಇಂದು ದಿಢೀರ್ ದಾಳಿ ನಡೆಸಿ, ರಾಸಾಯನಿಕ ಬಳಸಿ ಹಣ್ಣಾಗಿಸುತ್ತಿದ್ದ ಬಾಳೆಹಣ್ಣುಗಳನ್ನು ಜಪ್ತಿ ಮಾಡಿದೆ.

ಉಡುಪಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್ ಹಾಗೂ ಉಡುಪಿ ತಹಶೀಲ್ದಾರ್ ಗುರುರಾಜ್ ನೇತೃತ್ವದಲ್ಲಿ ನಡೆದ ಈ ಜಂಟಿ ಕಾರ್ಯಾಚರಣೆಯಲ್ಲಿ, ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕ ಬಳಸಿ ಕೃತಕವಾಗಿ ಹಣ್ಣು ಮಾಡುತ್ತಿದ್ದ ಸುಮಾರು 10 ಕೆ.ಜಿ. ಬಾಳೆಹಣ್ಣುಗಳನ್ನು ವಶಕ್ಕೆ ಪಡೆದು ಸ್ಥಳದಲ್ಲೇ ನಾಶಪಡಿಸಲಾಯಿತು.

ದಾಳಿ ವೇಳೆ ಹಣ್ಣುಗಳಿಗೆ ಕೃತಕ ಬಣ್ಣ ನೀಡಲು ಹಾಗೂ ಬೇಗ ಹಣ್ಣಾಗಿಸಲು ಬಳಸುತ್ತಿದ್ದ ಅಪಾಯಕಾರಿ ರಾಸಾಯನಿಕ ದ್ರವ್ಯಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಆರೋಪಿಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!