Saturday, May 11, 2024
Homeತಾಜಾ ಸುದ್ದಿಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ

spot_img
- Advertisement -
- Advertisement -

ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ.  ಅರುಣ್ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.

ಈ ಕುರಿತಂತೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ, 2023 ರ ಸೆಕ್ಷನ್ 11 ರ ಷರತ್ತು (1) ಕ್ಕೆ ಅನುಸಾರವಾಗಿ, ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರು ಸಲ್ಲಿಸಿದ ರಾಜೀನಾಮೆಯನ್ನು 2024 ರ ಮಾರ್ಚ್ 09 ರಿಂದ ಜಾರಿಗೆ ಬರುವಂತೆ ರಾಷ್ಟ್ರಪತಿಯವರು ಅಂಗೀಕರಿಸಿದ್ದಾರೆ ಎಂದು ತಿಳಿಸಲಾಗಿದೆ.

ಗೋಯೆಲ್ ಅವರು ನವೆಂಬರ್ 21, 2022 ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. 1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಅರುಣ್ ಗೋಯಲ್ ಈ ಹಿಂದೆ ಭಾರತ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

- Advertisement -
spot_img

Latest News

error: Content is protected !!