Tuesday, May 14, 2024
Homeಕರಾವಳಿಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರಿಂದ ಶಕ್ತಿ ಪ್ರದರ್ಶನ

ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರಿಂದ ಶಕ್ತಿ ಪ್ರದರ್ಶನ

spot_img
- Advertisement -
- Advertisement -

ಪುತ್ತೂರು; ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅತ್ತ ತೀವ್ರ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರ ಆಕ್ರೋಶ ಮುಗಿಲು ಮುಟ್ಟಿದೆ.

ಪುತ್ತೂರು ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಿಂದೂ ಸಂಘಟನೆ ಮುಖಂಡ ಅರುಣ್ ಪುತ್ತಿಲ ಕೋಟೆಚಾ ಸಭಾಂಗಣದಲ್ಲಿ ಬೆಂಬಲಿಗರ ಸಭೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು. ಹಾಲ್ ತುಂಬಾ ಸೇರಿದ್ದ ಬೆಂಬಲಿಗರು ಟಿಕೆಟ್ ನೀಡದ್ದಕ್ಕೆ ಆಕ್ರೋಶ ಹೊರಹಾಕಿದರಲ್ಲದೆ ಪಕ್ಷೇತರವಾಗಿ ಸ್ಪರ್ಧಿಸುವಂತೆ ಸೂಚಿಸಿದ್ದಾರೆ.

ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಕಾರ್ಯಕರ್ತರ ಧ್ವನಿ ವಿಧಾನಸಭೆಯಲ್ಲಿ ಮೊಳಗಬೇಕಾದರೆ ಕಾರ್ಯಕರ್ತರ ನೋವು ನಲಿವು ಅರಿತಿರುವ ಸಂಘಟನೆಯಲ್ಲಿ ದುಡಿಯುವವರಿಗೆ ಅವಕಾಶ ಸಿಗಬೇಕು. ಆದರೆ ಕಳೆದ ಕೆಲವು ವರ್ಷಗಳಿಂದ ಕಾರ್ಯಕರ್ತರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ. ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರುವ ನಿಟ್ಟಿನಲ್ಲಿ ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದಿರಿ. ಪಕ್ಷವು ನಿಮ್ಮ ಭಾವನೆಗಳಿಗೆ ಬೆಲೆ ನೀಡದಿದ್ದರೆ ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಇನ್ನೆರಡು ದಿನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಅವರು ಘೋಷಿಸಿದರು.

- Advertisement -
spot_img

Latest News

error: Content is protected !!