Thursday, June 4, 2026
Homeಕರಾವಳಿ ಪುತ್ತೂರು; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ಅರುಣ್ ಕುಮಾರ್ ಪುತ್ತಿಲ

 ಪುತ್ತೂರು; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ಅರುಣ್ ಕುಮಾರ್ ಪುತ್ತಿಲ

- Advertisement -
- Advertisement -

ಪುತ್ತೂರು; ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪುತ್ತೂರು  ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರ  ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಿನ್ನೆ ಅವರ ಬೆಂಬಲಿಗರ ಸಭೆ ನಡೆಸಿದ ಬೆನ್ನಲ್ಲೇ ಇಂದು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಅರುಣ್ ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವ ನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರ ಪರವಾಗಿ ಕಾರ್ಯ ನಿರ್ವಹಿಸಲು ಸಾವಿರಾರು ಕಾರ್ಯಕರ್ತರು ಉತ್ಸುಕರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!