Saturday, June 6, 2026
Homeಕರಾವಳಿಮಂಗಳೂರು; ಪ್ರಚೋದನಾಕಾರಿ ಭಾಷಣ ಪ್ರಕರಣ; ಉಪನ್ಯಾಸಕ ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು; ಪ್ರಚೋದನಾಕಾರಿ ಭಾಷಣ ಪ್ರಕರಣ; ಉಪನ್ಯಾಸಕ ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು

- Advertisement -
- Advertisement -

ಮಂಗಳೂರು; ಪ್ರಚೋದನಾಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪನ್ಯಾಸಕ ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಮಂಗಳೂರು ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಉಪನ್ಯಾಸಕ ಅರುಣ್ ಉಳ್ಳಾಲ್ ಖಾಸಗಿ ಕಾರ್ಯಕ್ರಮದಲ್ಲಿ ನಡೆದ ಸಂವಾದದ ವೇಳೆ ಹಿಂದುಗಳು ಹೇಗಿರಬೇಕು ಎಂಬುದನ್ನು ಮಾತನ್ನಾಡಿದರು ಎಂಬ ಕಾರಣಕ್ಕೆ ಮಂಗಳೂರು ಪೊಲೀಸರು ಜಾಮೀನು ರಹಿತ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು, ನಂತರದ ದಿನಗಳಲ್ಲಿ ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ ಜಿಲ್ಲಾ ನ್ಯಾಯಾಲಯ ಅರುಣ್ ಉಳ್ಳಾಲ್ ರವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅರುಣ್ ಉಳ್ಳಾಲ್ ಅವರ ಪರವಾಗಿ ಹಿಂದು ಜಾಗರಣ ವೇದಿಕೆಯ ಪ್ರಾಂತ ನ್ಯಾಯ ಜಾಗರಣ ಸಂಯೋಜಕರಾದ  ಕಿಶೋರ್ ಕುಮಾರ್ ವಾದ ಮಂಡಿಸಿದ್ದರು.

- Advertisement -

Latest News

error: Content is protected !!