Monday, June 8, 2026
Homeಇತರಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ಬಂಟ್ವಾಳ ವಕೀಲರ ಸಂಘಕ್ಕೆ ಭೇಟಿ

ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ಬಂಟ್ವಾಳ ವಕೀಲರ ಸಂಘಕ್ಕೆ ಭೇಟಿ

- Advertisement -
- Advertisement -

ಬಂಟ್ವಾಳ: ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅದ ಶ್ರೀಯುತ ಅರುಣ್ ಶ್ಯಾಮ್ ರವರು ವಕೀಲರ ಸಂಘ(ರಿ) ಬಂಟ್ವಾಳಕ್ಕೆ ಇಂದು ಮಧ್ಯಾಹ್ನ ಭೇಟಿ ನೀಡಿದ್ದರು.

ಅವರನ್ನು ವಕೀಲರ ಸಂಘದ ಅಧ್ಯಕ್ಷರಾದ ಗಣೇಶಾನಂದ ಸೋಮಯಾಜಿ ಆತ್ಮೀಯವಾಗಿ ಸ್ವಾಗತಿಸಿದರು. ವಕೀಲರ ಸಂಘ (ರಿ) ಬಂಟ್ವಾಳದ ಹಿರಿಯ ಕಿರಿಯ ವಕೀಲ ಮಿತ್ರರು ಸಭೆಯಲ್ಲಿ ಹಾಜರಿದದ್ದರು.

ಕಂದಾಯ ಇಲಾಖೆ ಸಮಸ್ಯೆಗಳು ಮತ್ತು ಇತರ ಸಮಸ್ಯೆಗಳ ಬಗ್ಗೆ ವಕೀಲರ ಸಂಘದ ಸದಸ್ಯರು ಮನವಿ ಮಾಡಿದ್ದು, ಸಮಸ್ಯೆಗಳ ಇತ್ಯರ್ಥಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಕೀಲರ ಸಂಘ(ರಿ) ಬಂಟ್ವಾಳದ ವತಿಯಿಂದ ಅರುಣ್ ಶ್ಯಾಮ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಕೀಲರ ಸಂಘ(ರಿ) ಬಂಟ್ವಾಳದ ಪ್ರಧಾನ ಕಾರ್ಯದರ್ಶಿ ವೀರೇಂದ್ರ ಎಂ ಸಿದ್ದಕಟ್ಟೆ ಅವರು ವಂದನಾರ್ಪಣೆ ಮಾಡಿದರು.

- Advertisement -

Latest News

error: Content is protected !!