ನವದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಗೆ ತೀವ್ರ ಮುಖಭಂಗವಾಗಿದ್ದು, 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಗೆದ್ದು ಬೀಗಿದೆ.
ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಭರ್ಜರಿ ಗೆಲುವು ಸಾಧಿಸಿದ್ದು, ಎಎಪಿಯ ಅರವಿಂದ್ ಕೇಜೀವಾಲ್ ಹೀನಾಯ ಸೋಲನುಭವಿಸಿದ್ದಾರೆ. ಮಾಳವೀಯ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದಾರೆ. ಬಿಜೆಪಿಯ ಸತೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ದೆಹಲಿ ಸಿಎಂ ಅತಿಶಿ ಗೆಲುವು ಸಾಧಿಸಿದ್ದರೆ. ಜಂಗುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ. ಮತ್ತೊಂದಡೆ ಮಾಳವೀಯ ನಗರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಸತೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ಸೋಲನುಭವಿಸಿದ್ದಾರೆ.
ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 47 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮ ಪಕ್ಷ 23 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಮಾಜಿ ಸಿಎಂ ಕೇಜಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಸಿಎಂ ಅತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಖಚಿತವಾಗಿದೆ.