- Advertisement -
- Advertisement -
ಮಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿ ಸಾಧನೆಗೈದ ಗಣ್ಯರಿಗೆ ನ. 1ರಂದು ನೀಡಲಾಗುವ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತಕಲೆ, ಸಮಾಜಸೇವೆ, ಜಾನಪದ, ಪರಿಸರ ವಿಜ್ಞಾನ, ವೈದ್ಯಕೀಯ, ಸಂಶೋಧನೆ ಹಾಗೂ ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ತಮ್ಮ ಸೇವೆ ಮತ್ತು ಸಾಧನೆಯ ವಿವರಗಳು ಹಾಗೂ ಸಂಬಂಧಿತ ದಾಖಲೆಗಳೊಂದಿಗೆ ಅ. 24ರೊಳಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


