Wednesday, June 24, 2026
Homeಕರಾವಳಿಉಡುಪಿಅಸಾನಿ ಚಂಡಮಾರುತದ ಎಫೆಕ್ಟ್: ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಗಾಳಿ ಸಹಿತ ಭಾರೀ ಮಳೆ

ಅಸಾನಿ ಚಂಡಮಾರುತದ ಎಫೆಕ್ಟ್: ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಗಾಳಿ ಸಹಿತ ಭಾರೀ ಮಳೆ

- Advertisement -
- Advertisement -

ಮಂಗಳೂರು: ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ, ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆ ಮುಂದಿನ ಎರಡು ಮೂರು ದಿನ ಆಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆ, ಅಸಾನಿ ಚಂಡಮಾರುತವು ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒಡಿಶಾದ ಪುರಿಗೆ ಕಾಲಿಟ್ಟಿದೆ. ಈ ಪರಿಣಾಮವಾಗಿ, ಇಂದು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಹಾಸನ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಹಾವೇರಿ, ಮೈಸೂರು, ಚಾಮರಾಜನಗರ, ಗದಗ, ದಾವಣಗೆರೆ, ಯಾದಗಿರಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ತಿಳಿಸಿದೆ.

- Advertisement -

Latest News

error: Content is protected !!