Wednesday, June 3, 2026
Homeಕರಾವಳಿಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ

- Advertisement -
- Advertisement -

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ವತಿಯಿಂದ ಪುತ್ತೂರಿನಲ್ಲಿ ಬೃಹತ್ ಮೆರವಣಿಗೆ ನಡೆಯಿತು.ಈ ಸಂದರ್ಭ ಪುತ್ತೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಮುಖ್ಯರಸ್ತೆಯಾಗಿ ಸಾಗಿದ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಚಲನಚಿತ್ರ ನಟಿ ಶ್ರುತಿ, ಸಂಸದ ತೇಜಸ್ವಿ ಸೂರ್ಯ, ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ಆಗಿರುವ ನಳಿನ್ ಕುಮಾರ್ ಕಟೀಲ್ ಮುಂತಾದವರು ಭಾಗಿಯಾದು. ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಸಾಗಿದರು.

- Advertisement -

Latest News

error: Content is protected !!