Monday, April 29, 2024
Homeತಾಜಾ ಸುದ್ದಿಕೊರೋನಾ ಬರುತ್ತೆ‌ ಕೆಲಸಕ್ಕೆ ಹೋಗಬೇಡ ಅಂತ ಬೈದಿದ್ದಕ್ಕೆ ಮನನೊಂದು ಆಶಾ ಕಾರ್ಯಕರ್ತೆ ಆತ್ಮಹತ್ಯೆ

ಕೊರೋನಾ ಬರುತ್ತೆ‌ ಕೆಲಸಕ್ಕೆ ಹೋಗಬೇಡ ಅಂತ ಬೈದಿದ್ದಕ್ಕೆ ಮನನೊಂದು ಆಶಾ ಕಾರ್ಯಕರ್ತೆ ಆತ್ಮಹತ್ಯೆ

spot_img
- Advertisement -
- Advertisement -

ಬೆಂಗಳೂರು: ಕೊರೊನಾ ಸೋಂಕು ಬರಬಹುದು ಕೆಲಸಕ್ಕೆ ಹೋಗಬೇಡ ಎಂದು ಅಣ್ಣ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಾವಗಡ ಮೂಲದ ಸವಿತಾ (27) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ನಗರದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಸವಿತಾ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನಿಂದ ದೂರವಾಗಿ, ಯಲಹಂಕದ ಮಾರುತಿ ನಗರದ ಅಣ್ಣನ ಮನೆಯಲ್ಲಿ ವಾಸವಾಗಿದ್ದರು.

ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗಬೇಡ ಎಂದು ಅಣ್ಣ ಬೈದಿದ್ದರಂತೆ. ಹೀಗಾಗಿ ಕಳೆದ ಹತ್ತು ದಿನಗಳಿಂದ ಸವಿತಾ ಕೆಲಸಕ್ಕೆ ಹೋಗಿರಲಿಲ್ಲ. ಅಲ್ಲದೆ ಅಣ್ಣನ ಬೈಗುಳಕ್ಕೆ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣದ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!