Tuesday, May 14, 2024
Homeತಾಜಾ ಸುದ್ದಿವಿಪಕ್ಷ ನಾಯಕರಾಗಿ ಮಾಜಿ ಸಚಿವ ಆರ್. ಅಶೋಕ್ ಆಯ್ಕೆ

ವಿಪಕ್ಷ ನಾಯಕರಾಗಿ ಮಾಜಿ ಸಚಿವ ಆರ್. ಅಶೋಕ್ ಆಯ್ಕೆ

spot_img
- Advertisement -
- Advertisement -

ಬೆಂಗಳೂರು : ವಿಪಕ್ಷ ನಾಯಕರಾಗಿ ಮಾಜಿ ಸಚಿವ ಆರ್. ಅಶೋಕ್ ಆಯ್ಕೆಯಾಗಿದ್ದಾರೆ. ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಆರ್. ಅಶೋಕ್ ಅವ್ರಿಗೆ ವಿಪಕ್ಷ ನಾಯಕ ಪಟ್ಟ ಕಟ್ಟಲಾಗಿದೆ. ಹೈಕಮಾಂಡ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿತ್ತು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!