Friday, October 4, 2024
Homeತಾಜಾ ಸುದ್ದಿಬೆಂಗಳೂರು ಕಂಬಳಕ್ಕೆ ಬ್ರಿಜ್ ಭೂಷಣ್ ಸಿಂಗ್ ಬರಲ್ಲ; ವಿವಾದಕ್ಕೆ ಸ್ಪಷ್ಟನೆ ನೀಡಿದ ಬೆಂಗಳೂರು ಕಂಬಳ ಸಮಿತಿಯ...

ಬೆಂಗಳೂರು ಕಂಬಳಕ್ಕೆ ಬ್ರಿಜ್ ಭೂಷಣ್ ಸಿಂಗ್ ಬರಲ್ಲ; ವಿವಾದಕ್ಕೆ ಸ್ಪಷ್ಟನೆ ನೀಡಿದ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್

spot_img
- Advertisement -
- Advertisement -

ಬೆಂಗಳೂರಿನಲ್ಲಿ ನವೆಂಬರ್ 25 ಹಾಗೂ 26 ರಂದು ನಡೆಯಲಿರುವ ಕಂಬಳದಲ್ಲಿ ಭಾಗಿಯಾಗಲು ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿದ್ದಂತ ಬ್ರಿಜ್ ಭೂಷಣ್ ಸಿಂಗ್ ಆಹ್ವಾನಿಸಲಾಗಿತ್ತು. ಆದರೆ ಅವರು ಕಂಬಳಕ್ಕೆ ಬರಲ್ಲ ಆ ಆಹ್ವಾನ ಪತ್ರಿಕೆಯನ್ನೇ ಬದಲಾಯಿಸೋದಾಗಿ ಕಾಂಗ್ರೆಸ್ ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ರೈ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಂಬಳ ಒಂದು ಕ್ರೀಡೆ. ಇದು ದೊಡ್ಡ ಕಾರ್ಯಕ್ರಮ. ಇದರಲ್ಲಿ ಕಾಂಗ್ರೆಸ್-ಬಿಜೆಪಿ ಎಂದು ರಾಜಕೀಯ ಇಲ್ಲ. ಬ್ರಿಜ್‌ ಭೂಷಣ್‌ ಆಹ್ವಾನಕ್ಕೆ ಸಿದ್ದಿ ಜನಾಂಗದವರು ಬಂದು ಕೋರಿದ್ದರು. ಆದರೆ, ಅವರು ಮೊನ್ನೆಯೇ ನಾನು ಕಾರ್ಯಕ್ರಮಕ್ಕೆ ಬರೋದಿಲ್ಲ ಎಂದು ತಿಳಿಸಿದ್ದಾರೆ.

ನ.25 ರಂದು ನಡೆಯಬೇಕಿದ್ದ ಸಭಾ ಕಾರ್ಯಕ್ರಮದಲ್ಲಿ ಕುಸ್ತಿಪಟುಗಳನ್ನು ಸನ್ಮಾನಿಸಲು ಸಂಸದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು. ಬ್ರಿಜ್ ಭೂಷಣ್ ಅವರು ಕುಡುಬಿ ಮತ್ತು ಸಿದ್ದಿ ಜನಾಂಗದವರಿಗೆ ಗೋವಾದಲ್ಲಿ ಕುಸ್ತಿ ತರಬೇತಿ ನೀಡಿದ್ದರು. ಈ ಸೇವೆಯನ್ನು ಪರಿಗಣಿಸಿ ಕಂಬಳಕ್ಕೆ ಆಹ್ವಾನ ನೀಡಲಾಗಿತ್ತು ಎಂದು ಕಂಬಳ ಸಮಿತಿಯ ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!