Tuesday, April 30, 2024
Homeಕರಾವಳಿಪುತ್ತೂರು: ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ;ಪೊಲೀಸ್ ದೌರ್ಜನ್ಯ ಎಸಗಲು ಒತ್ತಡ ಹಾಕಿದವರ ಹೆಸರು...

ಪುತ್ತೂರು: ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ;ಪೊಲೀಸ್ ದೌರ್ಜನ್ಯ ಎಸಗಲು ಒತ್ತಡ ಹಾಕಿದವರ ಹೆಸರು ಎರಡು ದಿನಗಳಲ್ಲಿ ಬಹಿರಂಗಪಡಿಸುವೆ; ಶಾಸಕ ಅಶೋಕ್ ರೈ ಹೇಳಿಕೆ

spot_img
- Advertisement -
- Advertisement -

ಪುತ್ತೂರು: ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಒತ್ತಡ ಹಾಕಿದವರ ಹೆಸರನ್ನು ಎರಡು ದಿನಗಳಲ್ಲಿ ಬಹಿರಂಗ ಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್  ರೈ ಹೇಳಿದ್ದಾರೆ.

ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಹಲ್ಲೆಗೆ ಕಾಂಗ್ರೆಸ್ಸಿನವರೇ ಕಾರಣ ಎಂದ ಕಲ್ಲಡ್ಕ ಪ್ರಭಾಕರ್ ಭಟ್ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕ ಅಶೋಕ್ ರೈ, ನನ್ನ ಕ್ಷೇತ್ರದಲ್ಲಿ ಅನ್ಯಾಯವಾದವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಿ ಅಮಾನತು ಮಾಡುವಂತೆ ಸೂಚಿಸಿದ್ದೆ ಅದರಂತೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸಲಾಗಿದೆ ಎಂದರು.

ಅಧಿಕಾರಿಗಳ ಮೇಲೆ ಒತ್ತಡ ಹಾಕಿದವರ ಕಾಲ್ ಲಿಸ್ಟ್ ತೆಗೆದು ಅದನ್ನು ಎರಡು ದಿನದೊಳಗೆ ಬಹಿರಂಗಪಡಿಸುವೆ ಆವಾಗ ಪುತ್ತೂರಿನ ಜನತೆಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!