Wednesday, June 24, 2026
Homeಕರಾವಳಿದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ವಿಪಕ್ಷ ನಾಯಕ ಅಶೋಕ್ ಭೇಟಿ

ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ವಿಪಕ್ಷ ನಾಯಕ ಅಶೋಕ್ ಭೇಟಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಭೇಟಿ ನೀಡಿದರು.

ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಕೇಂದ್ರ ಸರ್ಕಾರದ ವಿವಿಧ ಜನಸ್ನೇಹಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವುದು ಮತ್ತು ಮುಂಬರುವ ಲೋಕಸಭಾ ಚುನಾವಣೆ ಸಿದ್ದತೆಗಳ ಕುರಿತು ಅಶೋಕ್ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಭೈರತಿ ಬಸವರಾಜ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ‌ಸದಸ್ಯ ಪ್ರತಾಪ್ ನಾಯಕ್ ಹಾಗೂ ದಕ್ಷಿಣ ಕ‌ನ್ನಡ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!