Saturday, June 6, 2026
Homeಕರಾವಳಿಮಂಗಳೂರುಬೋಳಿಯಾರು ಚೂರಿ ಇರಿತ ಪ್ರಕರಣ; ಇಂದು ಗಾಯಾಳು ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಲಿರುವ ವಿಪಕ್ಷ ನಾಯಕ ಆರ್. ಅಶೋಕ್

ಬೋಳಿಯಾರು ಚೂರಿ ಇರಿತ ಪ್ರಕರಣ; ಇಂದು ಗಾಯಾಳು ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಲಿರುವ ವಿಪಕ್ಷ ನಾಯಕ ಆರ್. ಅಶೋಕ್

- Advertisement -
- Advertisement -

ಬೆಂಗಳೂರು: ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ಪ್ರಯುಕ್ತ ಏರ್ಪಡಿಸಿದ್ದ ವಿಜಯೋತ್ಸವದ ಬಳಿಕ ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರನ್ನು ಇಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಭೇಟಿ ಮಾಡಲಿದ್ದಾರೆ.

ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಅಶೋಕ್ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಲಿದ್ದಾರೆ

ಇಂದು ಬೆಳಗ್ಗೆ 11.30ಕ್ಕೆ ಆರ್. ಅಶೋಕ್ ದೇರಳಕಟ್ಟೆಯ ಕೆ.ಎಸ್‌.‌ ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.ನಿನ್ನೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್ ಮತ್ತು ಹರೀಶ್ ಪೂಂಜ ಮೊದಲಾದ ಬಿಜೆಪಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು‌.

- Advertisement -

Latest News

error: Content is protected !!