Saturday, June 6, 2026
Homeಕರಾವಳಿಮಂಗಳೂರು: ಚೂರಿ ಇರಿತದಿಂದ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ವಿಧಾನಸಭೆ ವಿಪಕ್ಷ ನಾಯಕ ಅಶೋಕ್

ಮಂಗಳೂರು: ಚೂರಿ ಇರಿತದಿಂದ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ವಿಧಾನಸಭೆ ವಿಪಕ್ಷ ನಾಯಕ ಅಶೋಕ್

- Advertisement -
- Advertisement -

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿನ ವಿಜಯೋತ್ಸವದ ಬಳಿಕ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದಿದ್ದ ಚೂರಿ ಇರಿತದಲ್ಲಿ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತರನ್ನು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಭೇಟಿ ಮಾಡಿದರು.

ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ‌ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಅಶೋಕ್, ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಜಿಲ್ಲೆಯ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಬೋಳಿಯಾರು ಮಸೀದಿ ಮುಂಭಾಗ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರಿಗೆ ಮುಸ್ಲಿಂ ಯುವಕರಿಂದ ಚೂರಿ ಇರಿಯಲ್ಪಟ್ಟಿದ್ದ, ಗಾಯಗೊಂಡಿರುವ ಇಬ್ಬರನ್ನು ಚಿಕಿತ್ಸೆಗಾಗಿ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!