Saturday, June 6, 2026
Homeಪ್ರಮುಖ-ಸುದ್ದಿಸಂಚಾರಿ ವಿಜಯ್ ಅವರ ಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಮುಂದಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

ಸಂಚಾರಿ ವಿಜಯ್ ಅವರ ಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಮುಂದಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

- Advertisement -
- Advertisement -

ಬೆಂಗಳೂರು_ಸಮಾಜಮುಖಿ ಕೆಲಸಗಳಲ್ಲೂ ತೊಡಗಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ರಸ್ತೆ ಅಪಘಾತಕ್ಕೊಳಗಾಗಿದ್ದ ಸಂಚಾರಿ ವಿಜಯ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದಲ್ಲಿ ಸಂಚಾರಿ ವಿಜಯ್ ಅವರ ಮೆದುಳು ಮತ್ತು ತೊಡೆ ಭಾಗಕ್ಕೆ ತೀವ್ರ ಪೆಟ್ಟು ಉಂಟಾಗಿದೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಕಾರಣ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ.

ಇಂದು ಬೆಳಗ್ಗೆ ವಿಜಯ್‌ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್‌ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಿಜಯ್ ಚಿಕಿತ್ಸೆಗೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್‌ ಭರಿಸುತ್ತದೆ ಎಂದು ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!