Friday, June 5, 2026
Homeತಾಜಾ ಸುದ್ದಿಕಾರವಾರ: ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಚಾರಿ ಪೋಲಿಸ್ ಠಾಣೆ ಎಎಸ್‌ಐ ಹೃದಯಾಘಾತದಿಂದ ಸಾವು

ಕಾರವಾರ: ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಚಾರಿ ಪೋಲಿಸ್ ಠಾಣೆ ಎಎಸ್‌ಐ ಹೃದಯಾಘಾತದಿಂದ ಸಾವು

- Advertisement -
- Advertisement -

ಕಾರವಾರ: ಸಂಚಾರಿ ಠಾಣೆಯಲ್ಲಿ ಇಂದು ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಚಾರಿ ಪೋಲಿಸ್ ಠಾಣೆ ಎಎಸ್‌ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕಾರವಾರ ನಗರದ ಸಂಚಾರಿ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಮ್ಮದ್ ಶೇಖ್(57) ಮೃತಪಟ್ಟಿದ್ದಾರೆ.

ಸಂಚಾರಿ ಠಾಣೆಯಲ್ಲಿ ಇಂದು ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಎಸ್‌ಐ ಮಹಮ್ಮದ್ ಶೇಖ್, ಧ್ವಜಾರೋಹಣ ಮುಗಿಸಿದ ನಂತರ ದಿಢೀರನೆ ಎದೆನೋವು ಕಾಣಿಸಿಕೊಂಡು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಬ್ಬಂದಿಗಳು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಎಎಸ್‌ಐ ಮಹಮ್ಮದ್ ಶೇಖ್ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!