- Advertisement -
![]()
- Advertisement -
ನವದೆಹಲಿ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ಸೆಪ್ಟೆಂಬರ್ 9 ರಿಂದ 28ರವರೆಗೆ ಪಂದ್ಯಾವಳಿ ನಡೆಯಲಿದೆ.
ಬಿಸಿಸಿಐ ಆತಿಥ್ಯದಲ್ಲಿ ಯುಎಇಯಲ್ಲಿ ಪಂದ್ಯಗಳು ನಡೆಯಲಿದ್ದು ಎಂಟು ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ.
ಟಿ-ಟ್ವೆಂಟಿ ಸ್ವರೂಪದಲ್ಲಿ ಟೂರ್ನಿ ನಡೆಯಲಿದ್ದು, ಮೊದಲ ಪಂದ್ಯ ಸೆಪ್ಟೆಂಬರ್ 9 ರಂದು ಅಫ್ಘಾನಿಸ್ತಾನ ಮತ್ತು ಹಾಂಕಾಂಗ್ ನಡುವೆ ನಡೆಯಲಿದೆ. ಸೆಪ್ಟೆಂಬರ್ 14 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ.
ಭಾರತ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಆಡಲಿದ್ದು, ಸೆಪ್ಟೆಂಬರ್ 28 ರಂದು ಫೈನಲ್ ಪಂದ್ಯ ನಡೆಯಲಿದೆ.
- Advertisement -


