- Advertisement -
- Advertisement -
ಮಂಗಳೂರು: ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಗೆದ್ದ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಡಿ.ಎಂ. ಅಸ್ಲಂ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಹುಸೇನ್ ಬೋಳಾರ, ರಾಜ್ಯ ಫುಟ್ಬಾಲ್ ಸಂಸ್ಥೆಯ ಸದಸ್ಯ ವಿಜಯ ಸುವರ್ಣ, ಖಜಾಂಚಿ ಫಿರೋಝ್ ಉಳ್ಳಾಲ, ಸದಸ್ಯರಾದ ಅನಿಲ್ ಟಿ.ವಿ., ಸುಜಿತ್ ಕೆ.ವಿ., ಭವೀಷ್, ಶಿಹಾಝ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು.
- Advertisement -


