Thursday, June 4, 2026
Homeಕರಾವಳಿಮಂಗಳೂರು: ಚುನಾವಣೆ ಫಲಿತಾಂಶದ ಬಳಿಕ ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ‌ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ಆರೋಪ

ಮಂಗಳೂರು: ಚುನಾವಣೆ ಫಲಿತಾಂಶದ ಬಳಿಕ ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ‌ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ಆರೋಪ

- Advertisement -
- Advertisement -

ಮಂಗಳೂರು: ಬಜರಂಗದಳ ಕಾರ್ಯಕರ್ತನಿಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ನಡೆದಿರುವ ಆರೋಪ ವ್ಯಕ್ತವಾಗಿದೆ.

ಉಳ್ಳಾಲ ತಾಲೂಕಿನ ಕುಂಪಲ ಎಂಬಲ್ಲಿ ಘಟನೆ ನಡೆದಿದ್ದು,ಕುಂಪಲ ನಿವಾಸಿಯಾಗಿರುವ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಹಲ್ಲೆಗೊಳಗಾದ ಬಜರಂಗದಳ ಕಾರ್ಯಕರ್ತ ಎಂದು ಹೇಳಲಾಗಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿರುವ ಸ್ಥಳೀಯ ಕೇಸರಿ ಮಿತ್ರ ವೃಂದ ಸಂಘಟನೆಯ ಸದಸ್ಯ ಗೌತಮ್ ಎಂಬಾತನಿಂದ ಹಲ್ಲೆ‌ ನಡೆದಿದೆ ಎಂದು ಆರೋಪಿಸಲಾಗಿದ್ದು, ಗಾಯಾಳು ಪ್ರವೀಣ್ ಪೂಜಾರಿಯನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಲೋಕಸಭಾ ಚುನಾವಣೆಯ ಫಲಿತಾಂಶ ಬಳಿಕ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದ್ದು, ಇಂದು ಪ್ರವೀಣ್ ಪೂಜಾರಿ ಕೆಲಸ ಮುಗಿಸಿ ವಾಪಸಾಗುತ್ತಿದ್ದ ವೇಳೆ ಅಡ್ಡಗಟ್ಟಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಹಲ್ಲೆ ನಡೆಸಿದ ಗೌತಮ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಪಟಾಕಿ ಸಿಡಿಸಿದ ದ್ವೇಷಕ್ಕೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಹಲ್ಲೆ ವೇಳೆ ಚರಂಡಿಗೆ ಬಿದ್ದ ಕಾರಣ ಪ್ರವೀಣ್ ತಲೆಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ.

ಉಳ್ಳಾಲ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತ‌ನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!