Sunday, June 7, 2026
Homeತಾಜಾ ಸುದ್ದಿಕನ್ಹಯ್ಯ ಲಾಲ್ ಹತ್ಯೆ: ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಹಲ್ಲೆ: ಜುಲೈ 12 ರವರೆಗೆ 4 ಆರೋಪಿಗಳು...

ಕನ್ಹಯ್ಯ ಲಾಲ್ ಹತ್ಯೆ: ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಹಲ್ಲೆ: ಜುಲೈ 12 ರವರೆಗೆ 4 ಆರೋಪಿಗಳು ಎನ್ಐಎ ಕಸ್ಟಡಿಗೆ

- Advertisement -
- Advertisement -

ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಮತ್ತು ಗೌಸ್ ಮೊಹಮ್ಮದ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 12ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಸ್ಟಡಿಗೆ ಕಳುಹಿಸಲಾಗಿದೆ.

ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಲಾಯರ್ ಗಳು ಹತ್ಯೆ ಆರೋಪಿಗಳ ಮೇಲೆ ಹಲ್ಲೆ ನಡೆಸಿದ್ದು ಅಲ್ಲದೆ ಬಾಟಲಿಗಳನ್ನು ಅವರ ಮೇಲೆ ಎಸೆದಿದ್ದಾರೆ.

ಜೂನ್ 28ರಂದು ಹಾಡುಹಗಲೇ ಆರೋಪಿಗಳು ಹಿಂದೂ ವ್ಯಕ್ತಿ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದ ಮಾಡಿದ್ದರು. ಉದಯಪುರ ಹತ್ಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ್ದಕ್ಕೆ ಟೈಲರ್ ಅವರನ್ನು ಹತ್ಯೆ ಮಾಡಲಾಗಿತ್ತು

- Advertisement -

Latest News

error: Content is protected !!