Friday, June 5, 2026
Homeತಾಜಾ ಸುದ್ದಿವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಅಮಾನತು ಪ್ರಕರಣ:ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್ ಖಾದರ್

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಅಮಾನತು ಪ್ರಕರಣ:ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್ ಖಾದರ್

- Advertisement -
- Advertisement -

ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ನಡೆದ ವಿಪಕ್ಷ ಬಿಜೆಪಿ ಪ್ರತಿಭಟನೆ ಮತ್ತು ಹತ್ತು ಬಿಜೆಪಿ ಶಾಸಕರ ಅಮಾನತು ವಿಚಾರವಾಗಿ ವಿಧಾನಸಭೆ ಸ್ಪೀಕರ್ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ರಾಜಭವನದಲ್ಲಿ ಇಂದು ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಯು.ಟಿ. ಖಾದರ್, ನಿನ್ನೆಯ ಸಂಪೂರ್ಣ ಘಟನಾವಳಿಗಳ‌ ಕುರಿತು ಮಾಹಿತಿ ನೀಡಿದ್ದಾರೆ.

ನಿನ್ನೆ ವಿಧಾನಸಭೆಯಲ್ಲಿ ಸ್ಪೀಕರ್ ಪೀಠದತ್ತ ವಿಧೇಯಕಗಳ ಪ್ರತಿಗಳನ್ನು ಹರಿದು ಎಸೆದು ಅಸಭ್ಯ ವರ್ತನೆ ತೋರಿದ ಆರೋಪದಡಿ ಹತ್ತು ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ. ಖಾದರ್ ಸದನದಿಂದ ಅಮಾನತುಗೊಳಿಸಿದ್ದರು.

ಇಂದು ಮಧ್ಯಾಹ್ನ ವಿಪಕ್ಷ ಬಿಜೆಪಿ ಸ್ಪೀಕರ್ ನಡೆ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ನಿರ್ಧರಿಸಿದೆ.

- Advertisement -

Latest News

error: Content is protected !!