ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಕಾರಣ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಬ್ಧವಾಗಿದೆ.
ಈ ಮೊದಲೇ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಇದೀಗ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಇದು ಮತ್ತಷ್ಟು ಕಳವಳಕಾರಿಯಾಗಿದೆ. ಮೇ 3ರವರೆಗೆ ಲಾಕ್ ಡೌನ್ ಮುಂದುವರೆಯಲಿದ್ದು, ಇದರ ಮಧ್ಯೆ ಇಂದು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆ ನಡೆಯುತ್ತಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ 11 ಗಂಟೆಗೆ ಸಭೆ ಆರಂಭವಾಗಲಿದ್ದು, ಇದಕ್ಕೂ ಮುನ್ನ ಸಂಪುಟ ಉಪ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆರ್ಥಿಕ ಪುನಶ್ಚೇತನಕ್ಕಾಗಿ ಕೈಗೊಳ್ಳಬೇಕಾದ ನಿರ್ಧಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಬಳಿಕ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದು, ಕೆಲವೊಂದು ವಲಯಗಳಲ್ಲಿ ಲಾಕ್ಡೌನ್ ಸಡಿಲಿಕೆ ಮಾಡುವ ಸಾಧ್ಯತೆ ಇದೆ. ಅಲ್ಲವೇ ಸಾರ್ವಜನಿಕರ ನೆರವಿಗಾಗಿ ಮತ್ತೊಂದು ಸುತ್ತಿನ ವಿಶೇಷ ಪ್ಯಾಕೇಜ್ ಘೋಷಿಸುವ ನಿರೀಕ್ಷೆಯಿದೆ.
