Friday, May 17, 2024
Homeಕರಾವಳಿಮಂಗಳೂರು : ಸುರತ್ಕಲ್‌ನಲ್ಲಿ ಜೆಸಿಬಿ ಯಂತ್ರ ಎಟಿಎಂ ದರೋಡೆಗೆ ಯತ್ನ ಪ್ರಕರಣ; ನಾಲ್ವರು ಆರೋಪಿಗಳನ್ನು ಬಂಧಿಸಿದ...

ಮಂಗಳೂರು : ಸುರತ್ಕಲ್‌ನಲ್ಲಿ ಜೆಸಿಬಿ ಯಂತ್ರ ಎಟಿಎಂ ದರೋಡೆಗೆ ಯತ್ನ ಪ್ರಕರಣ; ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಮಂಗಳೂರು : ಸುರತ್ಕಲ್‌ನಲ್ಲಿ ಜೆಸಿಬಿ ಯಂತ್ರ ಬಳಸಿ ಎಟಿಎಂ ದರೋಡೆ ನಡೆಸಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಜೆಸಿಬಿ ಸಹಿತ 15.50 ಲಕ್ಷದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ದೇವರಾಜ್ @ದೇವ್ (24), ಭರತ್ ಹೆಚ್(20), ನಾಗರಾಜ ನಾಯ್ಕ @ನಾಗು (21), ಮತ್ತು  ಇವರಿಗೆ ಧನ ಸಹಾಯ ಮಾಡಿದ ಧನರಾಜ್ ನಾಯ್ಕ್@ಧನು(22) ಬಂಧಿತರು.

ಆರೋಪಿಗಳಿಂದ 50 ,000 ಮೌಲ್ಯದ ಸ್ಪ್ಲೆಂಡರ್ ಬೈಕ್, 2 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆರೋಪಿಗಳು ಕ್ರಿಮಿನಲ್ ಹಿನ್ನೆಲೆ ಉಳ್ಳವರಾಗಿದ್ದು ಈ ಹಿಂದೆ ಕೂಡ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಗಸ್ಟ್ 4 ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾದಾಯಿನಿ ಸ್ಕೂಲ್ ಶಾಲೆ ಪಕ್ಕದ ರಾಜಶ್ರೀ ಕಟ್ಟಡದಲ್ಲಿನ ದಿ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಗಾಜನ್ನು ಒಡೆದು ಹಾಕಿ ಎಟಿಎಂ ಮಶೀನನ್ನು ಜೆಸಿಬಿ ಯಂತ್ರ ಬಳಸಿ ಕದ್ದು ಕೊಂಡು ಹೋಗಲು ಯತ್ನಿಸಿದ್ದರು. ಆರೋಪಿಗಳು ಕೃತ್ಯಕ್ಕರೆ ಬಳಸಿದ್ದ ಜೆಸಿಬಿ ಯಂತ್ರವು ಉಡುಪಿ ಜಿಲ್ಲೆ ಪಡುಬಿದ್ರಿಯಲ್ಲಿ ಕಳವು ಮಾಡಿದಾಗಿದ್ದು ಈ ಸಂಬಂಧ ಪಡುಬಿದ್ರೆ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಶಿವಮೊಗ್ಗದಲ್ಲಿ ಬಂಧಿಸಿ ಮಂಗಳೂರು ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದೆ.

- Advertisement -
spot_img

Latest News

error: Content is protected !!