Friday, June 5, 2026
Homeಕರಾವಳಿಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ

- Advertisement -
- Advertisement -

ಮಂಗಳೂರು: ಮಂಗಳೂರಿನ ಜುವೆಲ್ಲರಿ ಶಾಪ್ ಒಂದರಲ್ಲಿ ಯಲ್ಲಿ ಬೇರೆ ಬೇರೆ ಕೋಮಿನ ಜೋಡಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದೆ.

ಭಿನ್ನ ಕೋಮಿನ ಯುವಕ ಮತ್ತು ಯುವತಿ ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿ ಮನೆಯವರು ಜ್ಯುವೆಲ್ಲರಿ ಶಾಪ್ ಗೆ ಆಗಮಿಸಿ ಯುವಕನನ್ನು ತರಾಟೆ‌ಗೆತ್ತಿಕೊಂಡಿದ್ದಾರೆ.

ಮಂಗಳೂರಿನ ಕಂಕನಾಡಿ ಬಳಿ ಇರುವ ಸುಲ್ತಾನ್ ಜುವೆಲ್ಲರಿಯಲ್ಲಿ ಘಟನೆ ನಡೆದಿದ್ದು, ವಿಷಯ ತಿಳಿದು ಹಿಂದು ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದು
ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ಶೃಂಗೇರಿ ಮೂಲದ ಯುವತಿ ಮತ್ತು ಬಂಟ್ವಾಳ ಮೂಲದ ಯುವಕ ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು‌.

ಲವ್ ಜಿಹಾದ್ ಆರೋಪದಡಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!