Thursday, June 4, 2026
Homeಕರಾವಳಿಬೆಳ್ತಂಗಡಿ: ಕೊಕ್ಕಡದಲ್ಲಿ ರಿಕ್ಷಾ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಕೊಕ್ಕಡದಲ್ಲಿ ರಿಕ್ಷಾ ಚಾಲಕನ ಮೇಲೆ ಹಲ್ಲೆ

- Advertisement -
- Advertisement -

ಬೆಳ್ತಂಗಡಿ: ಬಾಡಿಗೆ ವಿಚಾರವಾಗಿ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಕ್ಕಡದ ರಿಕ್ಷಾ ಪಾರ್ಕ್‌ನಲ್ಲಿ ಚಾಲಕನಾಗಿರುವ ರಮೇಶ್‌ ಹಲ್ಲೆಗೊಳಗಾದವರು.

ರಮೇಶ್ ರಿಕ್ಷಾದಲ್ಲಿ ಪ್ರಯಾಣಿಕರೊಂದಿಗೆ ಬಾಡಿಗೆ ಹೊರಟಾಗ ರಿಕ್ಷಾ ಚಾಲಕ ದಿನೇಶ್‌ ತನ್ನ ಆಟೋ ರಿಕ್ಷಾವನ್ನು ರಮೇಶ್ ರಿಕ್ಷಾಕ್ಕೆ ಅಡ್ಡವಾಗಿ ನಿಲ್ಲಿಸಿ ರಮೇಶ್‌ ಅವರನ್ನು ರಿಕ್ಷಾದಿಂದ ಹೊರಗೆಳೆದು ಜಾತಿನಿಂದನೆ ಮಾಡಿ ಹಲ್ಲೆ ನಡೆಸಿ ರಿಕ್ಷಾದಲ್ಲಿದ್ದ ಪ್ರಯಾಣಿಕರನ್ನು ಅದರಿಂದ ಇಳಿಸಿ ತನ್ನ ರಿಕ್ಷಾದಲ್ಲಿ ಕರೆದೊಯ್ದಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ.

ಗಾಯಗೊಂಡಿರುವ ರಮೇಶ್‌ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!