- Advertisement -
![]()
- Advertisement -
ಬಂಟ್ವಾಳ: ಆಟೋ ಚಾಲಕನ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ.
ಬೋಳಂತೂರು ಸಮೀಪದ ಗುಳಿ ನಿವಾಸಿ ಆಟೋ ಚಾಲಕ ಶಾಕೀರ್(30) ಮೇಲೆ ಹಲ್ಲೆ ನಡೆಸಲಾಗಿದ್ದು, ಗಾಯಗೊಂಡ ಶಾಕೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳು ಶಾಕೀರ್ ಕಬಡ್ಡಿ ಪಂದ್ಯ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆಯಲ್ಲಿ ರಸ್ತೆಯಲ್ಲಿ ತಡೆದ ನಾಲ್ವರು ದುಷ್ಕರ್ಮಿಗಳು ತಂಡ
ತಲವಾರಿನಿಂದ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


