Monday, June 8, 2026
Homeತಾಜಾ ಸುದ್ದಿಮಲ್ಪೆ ಬಂದರಿನಲ್ಲಿ ಮಕ್ಕಳ ರಕ್ಷಣಾ ಘಟಕ ಹಾಗೂ ಇತರ ಇಲಾಖೆಗಳ ದಾಳಿ- 17...

ಮಲ್ಪೆ ಬಂದರಿನಲ್ಲಿ ಮಕ್ಕಳ ರಕ್ಷಣಾ ಘಟಕ ಹಾಗೂ ಇತರ ಇಲಾಖೆಗಳ ದಾಳಿ- 17 ಬಾಲಕಾರ್ಮಿಕರ ರಕ್ಷಣೆ!…

- Advertisement -
- Advertisement -

ಉಡುಪಿ: ಇಲ್ಲಿನ ಮಲ್ಪೆ ಬಂದರಿನಲ್ಲಿ ಇಂದು ಬೆಳಗ್ಗೆ ಮಕ್ಕಳ ರಕ್ಷಣಾ ಘಟಕ ಹಾಗೂ ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿ ಮೂಲಕ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.ಮಕ್ಕಳನ್ನು ಬಳ್ಳಾರಿ ಮತ್ತು ಕೊಪ್ಪಳ ಮೂಲದವರು ಎಂದು ಗುರುತಿಸಲಾಗಿದ್ದು ಇವರನ್ನು ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸಕ್ಕೆ ಅವ್ಯಾಹತವಾಗಿ ದುಡಿಸಲಾಗುತ್ತಿತ್ತು. ಈ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ.

ಬಾಲ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಾರ್ವಜನೀಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ನಾಗರಿಕ ಸೇವಾ ಟ್ರಸ್ಟ್ ಉಡುಪಿ ಇದರ ಅಧಿಕಾರಿಗಳು ಜಂಟಿಯಾಗಿ ಭಾಗವಹಿಸಿ ದಾಳಿ ನಡೆಸಿದ್ದಾರೆ.

- Advertisement -

Latest News

error: Content is protected !!