Tuesday, July 14, 2026
Homeಕರಾವಳಿಮಂಗಳೂರು:ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು:ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಮಂಗಳೂರು:ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ  ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.

ಪಡು ಪೆರೆರಾ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ ಮೇಲೆ ಬಿಜೆಪಿ ಮುಖಂಡ ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ಹಲ್ಲೆ ನಡೆಸಿ, ಬಳಿಕ‌ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸಿರುವ ಕುರಿತು  ನಿನ್ನೆ ಗ್ರಾಮ ಪಂಚಾಯತ್ ನಲ್ಲಿ ನಡೆದ ಸಭೆ ಬಳಿಕ ಪಿಡಿಒ ಪ್ರಮೋದ್ ಅವರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.ಈ ವೇಳೆ ಏಕಾಏಕಿ ಮನೆಯ ಗುತ್ತಿಗೆ ವಹಿಸಿರುವ ರಾಘವೇಂದ್ರ ಆಚಾರ್ ಮತ್ತು ಬಿಜೆಪಿ ಕಾರ್ಯಕರ್ತರೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ನೂರು ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು ಕಣ್ಣಿಗೂ ಗಾಯಗಳಾಗಿವೆ ಎನ್ನಲಾಗಿದೆ.ಈ ಬಗ್ಗೆ ನೂರ್ ಅಹ್ಮದ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ಯ ಮತ್ತು ರಾಜೇಶ್ ಸಾಲ್ಯಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!