Thursday, June 4, 2026
Homeಕರಾವಳಿಉಡುಪಿಕುಂದಾಪುರ: ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ: ದಕ್ಕೆಯಲ್ಲಿ ನಿಂತಿದ್ದ 3 ಟಿಪ್ಪರ್ ವಶಕ್ಕೆ

ಕುಂದಾಪುರ: ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ: ದಕ್ಕೆಯಲ್ಲಿ ನಿಂತಿದ್ದ 3 ಟಿಪ್ಪರ್ ವಶಕ್ಕೆ

- Advertisement -
- Advertisement -

ಕುಂದಾಪುರ: ಸಾರ್ವಜನಿಕರ ದೂರಿನ ಮೇರೆಗೆ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ತಾಲೂಕಿನ ವ್ಯಾಪ್ತಿಯಲ್ಲಿ ಎರಡು ಕಡೆಗಳಲ್ಲಿ  ದಾಳಿ ನಡೆದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಟಿಪ್ಪರ್ ಲಾರಿಗಳನ್ನು  ವಶಕ್ಕೆ ಪಡೆದಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಮಾರ್ಗದರ್ಶನದಲ್ಲಿ  ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಆನಗೋಡು ಎಂಬಲ್ಲಿ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ತ್ರಾಸಿ ಗ್ರಾಮ ವ್ಯಾಪ್ತಿಯ ಅರಮ ದೇವಸ್ಥಾನದ  ಹತ್ತಿರದ ಅನಧಿಕೃತ ಮರಳು ಗಣಿಗಾರಿಕೆ ದಕ್ಕೆಗೆ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ 2 ಟಿಪ್ಪರ್  ಲಾರಿಗಳನ್ನು  ವಶಕ್ಕೆ ಪಡೆಯಲಾಗಿದೆ.

- Advertisement -

Latest News

error: Content is protected !!